Skip to main content

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿರವರಿಂದ ಅಕ್ಟೋಬರ್-2022ರ ಮಾಹೆಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಅಧಿಕಾರಿಗಳಿಗೆ ಸೂಚನೆ-ಅಭಿನಂದನೆಗಳು

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿರವರಿಂದ ಅಕ್ಟೋಬರ್-2022ರ ಮಾಹೆಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಅಧಿಕಾರಿಗಳಿಗೆ ಸೂಚನೆ-ಅಭಿನಂದನೆಗಳು
ದಿನಾಂಕ:14-10-2022ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ “ಕೃಷ್ಣ”ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ “ಪುಣ್ಯಕೋಟಿ ದತ್ತು ಯೋಜನೆ'ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರೆ ಸಂಸ್ಥೆಗಳ ನೌಕರರ ದೇಣಿಗೆ ನೀಡುವ ಒಪ್ಪಿಗೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ಚರ್ಚೆ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಇದೇ ತಿಂಗಳಲ್ಲಿ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು ಹಾಗೂ ವೇತನ ಸಮಿತಿ/ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ವೇತನ ಭತ್ಯೆಗಳ ಜೊತೆ ನೌಕರರಿಗೆ ಇನ್ಸೆಂಟೀವ್ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಹೊಂದಲಾಗಿದ್ದು, ಆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಎನ್.ಪಿ.ಎಸ್. ರದ್ದುಪಡಿಸುವ ಬೇಡಿಕೆಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯ ಮಂತ್ರಿಗಳು ಈ ಸಂಬಂಧ ಅನ್ಯ ರಾಜ್ಯಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸ್ಪಷ್ಟ ಭರವಸೆಯನ್ನು ನೀಡಿರುತ್ತಾರೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ.
ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರು, ಪಶುಸಂಗೋಪನ ಸಚಿವರಾದ ಶ್ರೀ ಪ್ರಭು ಚವ್ಹಾಣ್, ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ. ಜಾಫರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿ, ಕಾರ್ಯಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಗೌರವಾಧ್ಯಕ್ಷರಾದ ಶ್ರೀ ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರಾದ ಶ್ರೀ ಎಂ.ವಿ. ರುದ್ರಪ್ಪ, ಶ್ರೀ ಎಸ್. ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಸಿದ್ದಬಸಪ್ಪ ಹಾಗೂ ಪದಾಧಿಕಾರಿಗಳು, ಬಿ.ಬಿ.ಎಂ.ಪಿ, ಬಿ.ಡಬ್ಲ್ಯೂ.ಎಸ್.ಎಸ್.ಬಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ವಿವಿಧ ನಿಗಮ ಮಂಡಳಿ, ವೃಂದ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು.

Comments

 1. ರಚನೆ ಆಗಿಲ್ಲ ಆದಮೇಲೆ ಶುಭಾಶಯಗಳು ತಿಳಿಶೋಣ

  ReplyDelete
 2. ಭ್ರಮೆ...NpS ರದ್ದು

  ReplyDelete
 3. ಬರೀ ಸೂಚನೆ..!! ರಚನೆಯಾದ ಮೇಲೆ ಧನ್ಯವಾದ ತಿಳಿಸೋಣ..! ಅದೂ ಕೇಂದ್ರ ಮಾದರಿ‌ ಆದರೆ ಮಾತ್ರ

  ReplyDelete
 4. Bari helta iratare ond kelsa 10 sal heltare heli heli election ge hogi bidatare.aste yav Kendra madari illa enilla bidi.

  ReplyDelete
 5. After Anouncement we will hounring,them,

  ReplyDelete
  Replies
  1. ವೇತನ ತಾರತಮ್ಯ ನಿವಾರಣೆ ಕೇಂದ್ರ ಮಾದರಿ ವೇತನ ಜಾರಿ ಇದು ಪ್ರಮುಖ ಬೇಡಿಕೆ ನಿರೀಕ್ಷೆ ಇಟ್ಟುಕೊಳ್ಳಬಹುದೇ

   Delete

Post a Comment

Propeller210918-2

Popular posts from this blog

ಪ್ರಾಥಮಿಕ ಶಾಲಾ ಶಿಕ್ಷಕರ (PST) ಆದ್ಯ ಗಮನಕ್ಕೆ…

ಪ್ರಾಥಮಿಕ ಶಾಲಾ ಶಿಕ್ಷಕರ ( PST ) ಆದ್ಯ ಗಮನಕ್ಕೆ … PST ಶಾಲಾ ಶಿಕ್ಷಕರಿಗೆ GPT ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಪ್ರಸ್ತಾವನೆಗೆ ಸಂಘದ ಮನವಿಯಂತೆ ಸಂಸದೀಯ ವ್ಯವಹಾರಗಳು ಇಲಾಖೆಯು ಅನುಮೋದನೆ ನೀಡಿರುತ್ತದೆ.   ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳ ಅಧಿಕಾರಿಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಸಂಘವು ಮನವಿ ಮಾಡಿದ್ದು , ಸದ್ಯದಲ್ಲೆ ಪ್ರಸ್ತಾವನೆಗೆ ಒಪ್ಪಿಗೆ ದೊರೆಯಲಿದೆ. GPT ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು , ಇದಕ್ಕೂ ಪೂರ್ವದಲ್ಲಿಯೇ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳ ಅಭಿಪ್ರಾಯ ಪಡೆಯುವುದು , DPAR-ACS ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸುವುದು , ಕ್ಯಾಬಿನೆಟ್ ಅನುಮೋದನೆ ಪಡೆಯುವುದು ಹಾಗೂ ಕರಡು ನಿಯಮಗಳನ್ನು ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕಟಿಬದ್ಧವಾಗಿರುತ್ತದೆ.   ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು , ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ 2.75 ರಷ್ಟು ತುಟ್ಟಿಭತ್ಯೆ ( Dearness Allowance ) ಹೆಚ್ಚಿಸಿ‌ ಆದೇಶಿಸಲಾಗಿದೆ.  “ ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು ' ಪುಸ್ತಕ ನೋಡಬಹುದು . &qu

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಆತ್ಮೀಯ ನೌಕರ ಬಾಂಧವರೇ...... 2022 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ  ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. Click Here --  https://bit.ly/ksgeaprathibapuraskara2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-07-2022. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು • ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  • ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. • ವಿದ್ಯಾರ್ಥಿಯು 2022ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.  ONLINE ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. ದೃಢೀಕೃತ ಅಂಕಪಟ್ಟಿ,  • ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯ

Followers